ಪುತ್ತೂರು : ಕೊರೋನಾ ಅಲೆ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ಈ ಕುರಿತಂತೆ ಆರೋಗ್ಯ ಇಲಾಖೆ ಹಾಗೂ ಪ್ರಮುಖ ಇಲಾಖೆಗಳ ತುರ್ತು ಸಭೆ ನಡೆಯಿತು.
ಸಭೆಯಲ್ಲಿ ಶಾಸಕ ಸಂಜೀವ ಮಠಂದೂರು ಕೋವಿಡ್ ನಿಯಂತ್ರಣ ಕ್ರಮಗಳನ್ನು ಪಾಲಿಸಿಕೊಂಡು ಮುಂದುವರೆಯಬೇಕು. ಈಗಾಗಲೆ ಪುತ್ತೂರಿನಲ್ಲೂ ಸಾಕಷ್ಟು ಕೋವಿಡ್ ಕೇಸ್ ಗಳಿದ್ದು ಆದಷ್ಟು ನಿಯಂತ್ರಣ ಸಾಧಿಸಬೇಕಾಗಿದೆ, ಈ ನಿಟ್ಟಿನಲ್ಲಿ ಉತ್ತಮ ರೀತಿಯಲ್ಲಿ ಮುಂದುವರೆದ ನಿಯಂತ್ರಿಸುವ ಕಾರ್ಯಗಳಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಸಹಾಯಕ ಕಮಿಷನರ್ ಡಾ ಯತೀಶ್ ಉಳ್ಳಾಲ್, ತಹಶೀಲ್ದಾರ್ ರಮೇಶ್ ಬಾಬು, ಪೌರಾಯುಕ್ತೆ ರೂಪಾ ಶೆಟ್ಟಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ ಅಶೋಕ್ ಕುಮಾರ್ ರೈ, ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ ಆಶಾ ಪುತ್ತೂರಾಯ, ನಗರಸಭೆ ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಶಬರಿನಾಥ್, ಆರೋಗ್ಯ ನಿರೀಕ್ಷಕರಾದ ರಾಮಚಂದ್ರ, ಶ್ವೇತಾ ಕಿರಣ್, ಸಿಡಿಪಿಒ ಶ್ರೀಲತಾ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಗಾಯತ್ರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.