ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನಡೆದಿದೆ.

ಮೃತರನ್ನು ಸಜೀಪ ನಿವಾಸಿ, ವಿಶ್ವ ಹಿಂದೂ ಪರಿಷದ್ ಮುಖಂಡ ರಾಜೇಶ್ ಪೂಜಾರಿ ಸಾನದಮನೆ ಎಂದು ಗುರುತಿಸಲಾಗಿದೆ.
ರಾಜೇಶ್ ಪೂಜಾರಿ ರವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ದ್ವಿಚಕ್ರ ವಾಹನ ಪತ್ತೆಯಾದ ಹಿನ್ನೆಲೆ ಸಂಶಯಗೊಂಡ ಪಾಣೆಮಂಗಳೂರು ಸೇತುವೆಯಲ್ಲಿ ಸಂಚರಿಸುವ ವಾಹನ ಸವಾರರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ತಂಡ ಕಾರ್ಯಾಚರಣೆ ನಡೆಸಿದ್ದು, ರಾಜೇಶ್ ಪೂಜಾರಿಯವರ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ.
ರಾಜೇಶ್ ರವರ ಸಾವಿನ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಂಡಿದ್ದು, ಅಪಘಾತವಾಗಿರಬಹುದೇ..!!? ಅಥವಾ ಆತ್ಮಹತ್ಯೆ ಮಾಡಿಕೊಂಡಿರಬಹುದೇ..!!?? ಎಂಬ ವಿಚಾರಗಳು ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ. ಪ್ರಕರಣದ ಸತ್ಯಾಸತ್ಯತೆ ತನಿಖೆಯ ನಂತರವಷ್ಟೇ ತಿಳಿಯಬೇಕಿದೆ…




























