ಬೆಳ್ತಂಗಡಿ : ಬೈಕ್ ಗಳೆರಡು ಮುಖಾಮುಖಿ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಬೈಕ್ ಸವಾರನೋರ್ವ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಇಬ್ಬರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಉರುವಾಲು ಪದವು ಎಂಬಲ್ಲಿ ಎ.19ರಂದು ರಾತ್ರಿ ನಡೆದಿದೆ. ಅಪಘಾತದಲ್ಲಿ ರಾಜೇಶ್ (30) ಮೃತಪಟ್ಟಿದ್ದು, ಅವರೊಂದಿಗಿದ್ದ ಸಹ ಸವಾರ ಪುರಂದರ ಹಾಗೂ ಇನ್ನೊಂದು ಬೈಕ್ ಚಲಾಯಿಸುತ್ತಿದ್ದ ಶಾಫಿ ಗಂಭೀರ ಗಾಯಗೊಂಡಿದ್ದಾರೆ.
ಕುಪ್ಪೆಟ್ಟಿ ಕಡೆಯಿಂದ ಬಂದಾರು ಕಡೆ ರಾಜೇಶ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತಿದ್ದ ಶಾಫಿ ಎಂಬವರ ಬೈಕ್ ಉರುವಾಲು ಮಸೀದಿ ಸಮೀಪದ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ರಾಜೇಶ್ ಹಾಗೂ ಪುರಂದರ ಒಂದೇ ಬೈಕ್ ನಲ್ಲಿದ್ದರು. ಅಪಘಾತದ ರಭಸಕ್ಕೆ ಮೂವರೂ ರಸ್ತೆಗೆಸೆಯಲ್ಪಟ್ಟಿದ್ದು.
ಗಂಭೀರ ಗಾಯಗೊಂಡ ಮೂವರನ್ನು ತಕ್ಷಣವೇ ಪುತ್ತೂರಿನ ಆಸ್ಪತ್ರೆಗೆ ಕರೆದುಕೊಂಡು ಬರುವಾಗ ದಾರಿ ಮಧ್ಯೆ ರಾಜೇಶ್ ಮೃತಪಟ್ಟಿದ್ದರು. ಪುರಂದರ ಅವರ ತಲೆಗೂ ಗಂಭೀರ ಗಾಯವಾಗಿದೆ.
ಗಾಯಗೊಂಡ ಶಾಫಿ ಹಾಗೂ ಪುರಂದರ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.