ನೇಪಾಳದ ಪೋಖರಾ ವಿಮಾನ ನಿಲ್ದಾಣದಲ್ಲಿ 72 ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದೆ.
ಏತಿ ಏರ್ಲೈನ್ಸ್ ನಿರ್ವಹಿಸುತ್ತಿದ್ದ ಎಟಿಆರ್-72 ವಿಮಾನವು ಕಸ್ಕಿ ಜಿಲ್ಲೆಯ ಪೋಖರಾದಲ್ಲಿ ಭಾನುವಾರ ಪತನಗೊಂಡಿದ್ದು, ಕನಿಷ್ಠ 40 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ರಕ್ಷಣಾ ಕಾರ್ಯ ಮುಂದುವರೆದಿದೆ, ವಿಮಾನದಲ್ಲಿ 68 ಪ್ರಯಾಣಿಕರು ಹಾಗೂ 4 ಸಿಬ್ಬಂದಿ ಇದ್ದರು. ಅಪಘಾತದ ಸ್ಥಳದಲ್ಲಿ 40 ಮೃತದೇಹಗಳು ಕಂಡುಬಂದಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅಪಘಾತಕ್ಕೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ.
ವಿಮಾನದಲ್ಲಿ 5 ಮಂದಿ ಭಾರತೀಯರು ಕೂಡ ಪ್ರಯಾಣಿಸುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಇದುವರೆಗೆ 40 ಮಂದಿಯ ಮೃತದೇಹ ಪತ್ತೆಯಾಗಿದೆ..




























