ಪುತ್ತೂರು : ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ವರ್ಷಾವಧಿ ನೇಮ ನಡಾವಳಿಯು ಏ.28 ರಂದು ನಡೆಯಲಿದೆ. ಏ.20 ರಂದು ಗೊನೆ ಮೂಹೂರ್ತ ನಡೆದು, ಏ.25 ರಂದು ಮುಂಡ್ಯ ಹಾಕುವ ಕಾರ್ಯಕ್ರಮ ನಡೆಯಲಿದೆ.
ಏ.28 ರಂದು ಬೆಳಿಗ್ಗೆ ಶ್ರೀ ದಂಡನಾಯಕ ದೈವದ ವಲಸರಿ ನೇಮೋತ್ಸವ ನಡೆಯಲಿದೆ ನಂತರ ಶ್ರೀ ಉಳ್ಳಾಲ್ತಿ ಅಮ್ಮನವರ ನೇಮೋತ್ಸವ ನೆರವೇರಲಿದೆ. ಮಧ್ಯಾಹ್ನ ಅನ್ನ ಸಂತರ್ಪಣೆ ನಂತರ ಕಾಳರಾಹು ಮತ್ತು ದೈವಗಳ ನೇಮೋತ್ಸವವು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸರಕಾರದ ನಿಯಮದಂತೆ ಕೋವಿಡ್-19 ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಿಕೊಂಡು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಎಲ್ಲರೂ ಭಾಗವಹಿಸಿ ಪ್ರಸಾದವನ್ನು ಸ್ವೀಕರಿಸಿ ದೈವಗಳ ಕೃಪೆಗೆ ಪಾತ್ರರಾಗಬೇಕೆಂದು ದೈವಸ್ಥಾನ ವ್ಯವಸ್ಥಾಪನಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.