ನೆಹರುನಗರ ವಿವೇಕಾನಂದ ಕಾಲೇಜು ಮತ್ತು ಉಪ್ಪಿನಂಗಡಿ ಸಂಪರ್ಕಕ್ಕೆ ನೆಹರುನಗರದಲ್ಲಿರುವ ರೈಲ್ವೇ ಮೇಲ್ಸೇತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ 5.35 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ರವರು ಟ್ವಿಟ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡು ಕೇಂದ್ರ ಸರಕಾರ ಮತ್ತು ಕೇಂದ್ರ ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ರನ್ನು ಅಭಿನಂದಿಸಿದ್ದಾರೆ.
‘ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಿ ಜನರಿಗೆ ಸಹಾಯವಾಗುವ ನಿಟ್ಟಿನಲ್ಲಿ ಹಾಸನ ಮಂಗಳೂರು ಜಂಕ್ಷನ್ ನಡುವೆ ನೆಹರುನಗರ ಕಬಕ ಪುತ್ತೂರಿನಲ್ಲಿ ರೈಲ್ವೇ ಓವರ್ ಬ್ರಿಡ್ಜ್ ನಿರ್ಮಾಣಕ್ಕಾಗಿ 5.35 ಕೋ. ರೂ. ಮಂಜೂರು ಮಾಡಿದ ಕೇಂದ್ರ ಸರ್ಕಾರ ಮತ್ತು ರೈಲ್ವೇ ಸಚಿವರಾದ ಅಶ್ವಿನ್ ವೈಷ್ಣವ್ ರವರಿಗೆ ಅಭಿನಂದನೆಗಳು’ ಎಂದು ಸಂಸದ ನಳಿನ್ ಕುಮಾರ್ ರವರು ಟ್ವೀಟ್ ಮಾಡಿದ್ದಾರೆ..



























