ಮಂಗಳೂರು: ಭಾರತದಿಂದ ದುಬೈಗೆ ತೆರಳುವ ಪ್ರಯಾಣಿಕರು ಹೊಂದಿರಬೇಕಾದ ಕೋವಿಡ್ ಟೆಸ್ಟ್ ಪ್ರಮಾಣಪತ್ರದ ಅವಧಿಯನ್ನು 72 ಗಂಟೆಯಿಂದ 48ಗಂಟೆಗಳ ಇಳಿಸಲಾಗಿದೆ.ದುಬೈಗೆ ನಾಗರಿಕ ವಿಮಾನಯಾನ ಪ್ರಾಧಿಕಾರದವರು ನೀಡಿರುವ ಮಾಹಿತಿ ಪ್ರಕಾರ ಏಪ್ರಿಲ್ 22ರಿಂದ ಇದು ಅನ್ವಯವಾಗಲಿದೆ.
ಸ್ಯಾಂಪಲ್ ಸಂಗ್ರಹದ ದಿನಾಂಕ ಸಮಯ ಮತ್ತು ವರದಿ ಸಿಕ್ಕಿದ ದಿನ ಸಮಯ ಸರಿಯಾಗಿರುವಂತೆ ನೋಡಿಕೊಳ್ಳಬೇಕು ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಕೊರೊನಾವೈರಸ್ ಹರಡುವಿಕೆಯನ್ನು ತಗ್ಗಿಸುವ ಪ್ರಯತ್ನಗಳನ್ನು ಬೆಂಬಲಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪ್ರಯಾಣಿಕರಲ್ಲಿ ದುಬೈ ನಾಗರಿಕ ವಿಮಾನಯಾನ ಪ್ರಾಧಿಕಾರವು ವಿನಂತಿಸಿದೆ.