ಪುತ್ತೂರು: ವ್ಯಕ್ತಿಯೋರ್ವ ಯುವತಿಯೋರ್ವಳಿಗೆ ಚೂರಿ ಇರಿದ ಘಟನೆ ಮುಂಡೂರಿನಲ್ಲಿ ನಡೆದಿದೆ.
ಮೃತ ಯುವತಿಯನ್ನು ಮುಂಡೂರು ಕಂಪ ನಿವಾಸಿ ದಿ.ಗುರುವಪ್ಪ ಮತ್ತು ದೇವಕಿ ದಂಪತಿಗಳ ಪುತ್ರಿ ಜಯಶ್ರೀ (23) ಎಂದು ಗುರುತಿಸಲಾಗಿದೆ.
ವ್ಯಕ್ತಿಯೋರ್ವ ಯುವತಿಗೆ ಚೂರಿ ಇರಿದಿದ್ದು, ಯುವತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.

ಜಯಶ್ರೀ ಈ ಮೊದಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಕೆಲ ಸಮಯದಿಂದ ಕೆಲಸ ಬಿಟ್ಟು ಮನೆಯಲ್ಲಿಯೇ ಇದ್ದಳು ಎಂದು ತಿಳಿದು ಬಂದಿದೆ. ಯುವತಿಯ ಸಹೋದರ ಫ್ಯಾಷನ್ ಡಿಸೈನಿಂಗ್ ಕಲಿಯುತ್ತಿದ್ದು, ಯುವತಿಯ ತಂದೆ ಕೋವಿಡ್ ನಿಂದಾಗಿ ಮೃತಪಟ್ಟಿದ್ದರು.

ಯುವತಿಯ ಮೃತದೇಹವನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದ್ದು, ಸಂಪ್ಯ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಡಿವೈಎಸ್ ಪಿ ಹಿರೇಮಠ್ ರವರು ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.



























