ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ವತಿಯಿಂದ ಕರ್ನಾಟಕ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ, ವಿಜ್ಞಾನಗಳ ವಿದ್ಯಾಲಯ ಬೀದರ್ ಐ ಸಿ ಎ ಆರ್ ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಇವರ ಸಹಯೋಗದೊಂದಿಗೆ `ಸಾವಯವ ಗೊಬ್ಬರ ತಯಾರಿ ಬಗ್ಗೆ ಪ್ರಾತ್ಯಕ್ಷತೆ, ಸಸ್ಯ ಸಂರಕ್ಷಣೆಯ ಬಗ್ಗೆ ಮಾಹಿತಿ ಮತ್ತು ಉಚಿತ ಕಿಟ್ ವಿತರಣಾ ಕಾರ್ಯಕ್ರಮವು ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ, ಎರ್ಮನಿಲೆ ರಜಿತ್ ಆಳ್ವರ ಮನೆಯಲ್ಲಿ ನಡೆಯಿತು.

ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಸುಧೇಶ್ ಭಂಡಾರಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಟ್ಲ ಪಿಂಗಾರ ತೋಟಗಾರಿಕಾ ರೈತ ಉತ್ಪಾದಕರ ಕಂಪನಿಯ ಅಧ್ಯಕ್ಷ ರಾಮ್‌ಕಿಶೋರ್ ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಮಂಗಳೂರು ಕೆ ವಿ ಕೆಯ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ.ಟಿ ಜೆ ರಮೇಶ್, ಬೇಸಾಯ ಶಾಸ್ತ್ರ ವಿಜ್ಞಾನಿ ಡಾ. ನವೀನ್ ಕುಮಾರ್ ಬಿ ಟಿ ಮತ್ತು ಸಸ್ಯ ಸಂರಕ್ಷಣೆ ವಿಜ್ಞಾನಿ ಡಾ. ಕೇದಾರನಾಥ ಮಾಹಿತಿ ಮತ್ತು ಪ್ರಾತ್ಯಕ್ಷತೆ ನಡೆಸಿಕೊಟ್ಟರು.

ಕೃಷಿಕ ದೇವಣ್ಣ ಆಳ್ವ, ಲಯನ್ಸ್ ಕ್ಲಬ್ ಕೋಶಾಧಿಕಾರಿ ರವಿಶಂಕರ್ ಸದಸ್ಯರುಗಳಾದ ಅರವಿಂದ ರೈ, ಇಕ್ಬಾಲ್, ಬಾಲಕೃಷ್ಣ ಗೌಡ ಮತ್ತು ಸಫ್ವಾನ್ ಹಾಗೂ ಕೃಷಿಕರು ಭಾಗವಹಿಸಿದ್ದರು. ಸುಮಾರು ನೂರು ಮಂದಿ ಕೃಷಿಕರಿಗೆ ಕಿಟ್ ವಿತರಿಸಲಾಯಿತು.

