ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಜ.18 ರಂದು ಬೆಂಗಳೂರಿನಲ್ಲಿ ಅನಿರ್ದಿಷ್ಟಕಾಲ ಧರಣಿ ಸತ್ಯಾಗ್ರಹ ನಡೆಯಲಿದ್ದು, ಈ ಹಿನ್ನೆಲೆ ನಾಳೆಯಿಂದ ಅಂಗನವಾಡಿ ಕೇಂದ್ರಗಳು ಬಂದ್ ಆಗಲಿದೆ.
ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ಬೆಂಗಳೂರು ಸಿಟಿ ರೈಲ್ವೇ ನಿಲ್ದಾಣದ ಮುಂಭಾಗದಿಂದ ಫ್ರೀಡಂಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ಅನಿರ್ದಿಷ್ಟಕಾಲ ಧರಣಿ ಸತ್ಯಾಗ್ರಹ ನಡೆಯಲಿದೆ.
ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಹಿನ್ನೆಲೆ ನಾಳೆಯಿಂದ ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುದಿಲ್ಲ ಎಂದು ತಿಳಿದು ಬಂದಿದೆ..



























