ಪುತ್ತೂರು: ಯುವತಿಯೋರ್ವಳಿಗೆ ಚೂರಿ ಇರಿದು ಹತ್ಯೆ ಮಾಡಿದ ಘಟನೆ ಮುಂಡೂರಿನಲ್ಲಿ ನಡೆದಿದ್ದು, ಈ ಘಟನೆಯನ್ನು ಶಾಸಕ ಸಂಜೀವ ಮಠಂದೂರು ತೀವ್ರವಾಗಿ ಖಂಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಘಟನೆಗೆ ಸಂಬಂಧಪಟ್ಟಂತೆ ಯಾರೆಲ್ಲಾ ಅದರಲ್ಲಿ ಭಾಗಿಗಳಾಗಿದ್ದಾರೊ ಅವರನ್ನು ಪತ್ತೆ ಹಚ್ಚುವ ಕಾರ್ಯವನ್ನು ಪೊಲೀಸ್ ಇಲಾಖೆಯವರು ಮಾಡುತ್ತಿದ್ದಾರೆ.
ಕುಟುಂಬಕ್ಕೂ ಪರಿಹಾರ ನೀಡುವಂತಹ ಕೆಲಸವನ್ನು ಮಾಡಬೇಕಾಗಿ ಸರಕಾರದ ಪರವಾಗಿ ಕೇಳಿಕೊಳ್ಳುತ್ತಿದ್ದೇನೆ. ಯುವತಿಯನ್ನು ಕಳೆದುಕೊಂಡು ಅನಾಥವಾಗಿರುವ ಕುಟುಂಬದ ವ್ಯಕ್ತಿಗಳಿಗೆ ಉದ್ಯೋಗ ನೀಡುವಂತಹ ಕೆಲಸವನ್ನು ಮುಂದಿನ ದಿನಗಳಲ್ಲಿ ನಾವು ಮಾಡುತ್ತೇವೆ.
ಯುವತಿಯ ಹತ್ಯೆಗೆ ಕಾರಣವಾದ ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಿ, ಕಠಿಣ ಶಿಕ್ಷೆಯನ್ನು ಪೊಲೀಸ್ ಇಲಾಖೆ ನೀಡಬೇಕು’ ಎಂದು ಅವರು ಆಗ್ರಹಿಸಿದರು.



























