ಬೆಳ್ತಂಗಡಿ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಡಿರುದ್ಯಾವರ ಗ್ರಾಮದ ಸುಧೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಕಡಿರುದ್ಯಾವರ ಗ್ರಾಮದ ಕೊಪ್ಪದ ಗಂಡಿ ಸಮೀಪ ಬಾಲಕಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಗರ್ಭಪಾತ ಮಾಡಿಸಿದ ಪ್ರಕರಣದಲ್ಲಿ ಸುಧೀರ್ ಪ್ರಮುಖ ಆರೋಪಿಯಾಗಿದ್ದ. ಉಳಿದಂತೆ ಬಾಲಕಿಯ ಗರ್ಭಪಾತಕ್ಕೆ ಸಹಕರಿಸಿದ್ದ ಸುಧೀರ್ ತಮ್ಮ ಮನೋಹರ್ (23), ಸಂಬಂಧಿ ಮಾದವ (55) ಎಂಬಾತನನ್ನು ಈಗಾಗಲೇ ಬಂಧಿಸಲಾಗಿತ್ತು.
ಕೇಸು ದಾಖಲಾದ ಬಳಿಕ ಪ್ರಮುಖ ಆರೋಪಿ ಸುಧೀರ್ ತಲೆಮರೆಸಿಕೊಂಡಿದ್ದ. ಆರೋಪಿ ಸುಧೀರ್ ಬಂಧನಕ್ಕೆ ಒತ್ತಾಯಿಸಿ ಇತ್ತೀಚೆಗೆ ಬಿಲ್ಲವ ಸಂಘಟನೆಗಳಿಂದ ಪೊಲೀಸರಿಗೆ ಮನವಿ ಸಲ್ಲಿಸಲಾಗಿತ್ತು. ಸುಧೀರ್ ಚಿಕ್ಕಮಗಳೂರು ಸುತ್ತಮುತ್ತ ಕೆಲಸ ಮಾಡುತ್ತಿದ್ದ ಮಾಹಿತಿ ಪಡೆದ ಬೆಳ್ತಂಗಡಿ ವೃತ್ತನಿರೀಕ್ಷಕರು ಮತ್ತು ಅವರ ತಂಡ ಜ.17 ರಂದು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಯುವತಿ ಗರ್ಭಪಾತಕ್ಕೆ ಆರೋಪಿ ತಾಯಿ ಪಾರ್ವತಿ (60) ಸಹಕರಿಸಿದ್ದು, ಯುವತಿ ತಾಯಿ ಎಂದು ಆಸ್ಪತ್ರೆಯಲ್ಲಿ ಸುಳ್ಳು ಮಾಹಿತಿ ನೀಡಿದ್ದರು ಎಂದು ತಿಳಿದು ಬಂದಿದೆ. ಈ ಕುರಿತು ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ..