ಮಂಗಳೂರು: ಸುರತ್ಕಲ್ 3ನೇ ಬ್ಲಾಕ್ ನಿವಾಸಿ, ಮಣಪ್ಪುರಂ ಫೈನಾನ್ಸ್ ಉದ್ಯೋಗಿಯಾಗಿದ್ದ ಯುವತಿ ಜ.16 ರಂದು ಕೆಲಸಕ್ಕೆ ಹೋದವರು ಮನೆಗೆ ಹಿಂದಿರುಗಿ ಬಾರದೆ ನಾಪತ್ತೆಯಾಗಿದ್ದಾರೆ.
ಕಮಲಾಕ್ಷ ಎಂಬವರ ಪುತ್ರಿ ಶಿವಾನಿ (20) ಕಾಣೆಯಾದ ಯುವತಿ.

ಈಕೆ ಜ.16ರಂದು ಬೆಳಗ್ಗೆ ಕೆಲಸಕ್ಕೆ ತೆರಳಿದ್ದು, ಸಂಜೆ ಮರಳಿ ಬಂದಿಲ್ಲ, ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಸಂಸ್ಥೆಯ ಸಿಬ್ಬಂದಿಯವರಲ್ಲಿ ವಿಚಾರಿಸಿದಾಗಲೂ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ..


























