ವಿಟ್ಲ: ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯ ಸಂದರ್ಭದಲ್ಲಿ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಅಮೈ ಗಿರೀಶ್ ಭಟ್ ನೇತೃತ್ವದಲ್ಲಿ ರುದ್ರಯಾಗ ನಡೆಯಿತು.

ದೇವಸ್ಥಾನದ ಅನುವಂಶಿಕ ಮೊಕ್ತೇಸರಾದ ವಿಟ್ಲ ಅರಮನೆಯ ಬಂಗಾರು ಅರಸರು, ವಿಟ್ಲ ಅರಮನೆಯ ಸದಾಶಿವ ಕೆ ಮತ್ತು ಕೃಷ್ಣಯ್ಯ ಕೆ, ಜೋರ್ಣೋದ್ಧಾರ ಸಮಿತಿ ಅಧ್ಯಕ್ಷ ಎಲ್ ಎನ್ ಕೂಡೂರು, ಸಿರಿ ಎಲ್.ಎನ್. ಕೂಡೂರು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ಸಾಲಿಯಾನ್, ಹೇಮಲತಾ ಜೆ ಸಾಲಿಯಾನ್, ಅನಂತಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು..



























