ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ವತಿಯಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಯು ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರನ್ನು ಮತ್ತು ಸಹಾಯಕಿಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜ.18 ರಂದು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.
ಧರಣಿ ಸತ್ಯಾಗ್ರಹದ ಪ್ರಾರಂಭದಲ್ಲಿ ಬೆಂಗಳೂರು ಸಿಟಿ ರೈಲ್ವೇ ನಿಲ್ದಾಣದ ಮುಂಭಾಗದಿಂದ ಫ್ರೀಡಂಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು.

ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಸುಮಾರು 300ಕ್ಕೂ ಅಧಿಕ ಮಂದಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಬೆಂಗಳೂರಿನಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದು, ಹಲವರನ್ನು ಇಂದು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ…