ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಹೊಂಬಾಳೆ ಫಿಲ್ಮ್ಸ್ಅಭೂತಪೂರ್ವ ಯಶಸ್ಸು ಕಂಡಿತು. ನಿರ್ಮಾಪಕ ವಿಜಯ್ ಕಿರಗಂದೂರು ಅವರು ಈ ಚಿತ್ರದಿಂದ ಸಾಕಷ್ಟು ಲಾಭ ಕಂಡರು. ಇತ್ತೀಚೆಗೆ ಚಿತ್ರತಂಡ ಪಂಜುರ್ಲಿ ದೈವಕ್ಕೆ ಹರಕೆ ತೀರಿಸಿತ್ತು.
ಈ ವೀಡಿಯೋ ಅನ್ನು ಚಿತ್ರತಂಡ ಹಂಚಿಕೊಂಡಿದೆ. ಆ ಕ್ಷಣಗಳನ್ನು ಅದ್ಭುತವಾಗಿ ಸೆರೆ ಹಿಡಿದು ಹೊಂಬಾಳೆ ಫಿಲ್ಮ್ಸ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ವೀಡಿಯೋ ನೋಡಿದ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಇನ್ನೂ ಕೆಲವರು ಈ ವೀಡಿಯೋ ರೋಮಾಂಚನಕಾರಿ ಆಗಿದೆ ಎಂದಿದ್ದಾರೆ.
‘ಕಾಂತಾರ’ ಸಿನಿಮಾದ ಜೀವಾಳ ದೈವ. ರಿಷಬ್ ಶೆಟ್ಟಿ ಅವರು ಕರಾವಳಿಯವರು. ಅಲ್ಲಿಯ ಸಂಸ್ಕೃತಿಯನ್ನೇ ಇಟ್ಟುಕೊಂಡು ಸಿನಿಮಾ ಮಾಡಿದ್ದರು. ‘ಕಾಂತಾರ’ ಚಿತ್ರದಲ್ಲಿ ಪಂಜುರ್ಲಿ ದೈವ ಬಹಳ ಮಹತ್ವದ ಪಾತ್ರ ವಹಿಸಿತ್ತು. ಈ ಸಿನಿಮಾ ಯಶಸ್ಸು ಕಂಡಿರುವುದರಿಂದ ಚಿತ್ರತಂಡ ಖುಷಿಯಲ್ಲಿದೆ. ರಿಷಬ್ ಶೆಟ್ಟಿ ಅವರು ಸ್ಟಾರ್ ಹೀರೋ ಆಗಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅವರ ಖ್ಯಾತಿ ಹಬ್ಬಿದೆ.
ಇತ್ತೀಚೆಗೆ ರಿಷಬ್ ಶೆಟ್ಟಿ, ಪ್ರಗತಿ ಶೆಟ್ಟಿ, ವಿಜಯ್ ಕಿರಗಂದೂರು, ಸಪ್ತಮಿ ಗೌಡ, ಪ್ರಮೋದ್ ಶೆಟ್ಟಿ ಮೊದಲಾದವರು ಮಂಗಳೂರಿನ ಅಣ್ಣಪ್ಪ ಪಂಜುರ್ಲಿ ನೇಮೋತ್ಸವದಲ್ಲಿ ಹರಕೆ ತೀರಿಸಿದ್ದರು. ಆ ಫೋಟೋಗಳು ವೈರಲ್ ಆಗಿದ್ದವು. ಈಗ ವೀಡಿಯೋ ಮಾಡಿ ಹೊಂಬಾಳೆ ಫಿಲ್ಮ್ಸ್ ಹಂಚಿಕೊಂಡಿದೆ. ಇದನ್ನು ನೋಡಿ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ…


























