ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ
ತಾಲೂಕಿನ ನೀಲಮ್ಮ ಸಾವನ್ನಪ್ಪಿದ್ದಾಳೆ. ವಿವಿಧ
ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ನೀಲಮ್ಮಗೆ ಚಳಿ ಮತ್ತು ಜ್ವರ ಕಾಣಿಸಿಕೊಂಡು
ಸಾವನ್ನಪ್ಪಿದ್ದಾರೆ.
ಈ ವಿಚಾರ ಗೊತ್ತಾಗುತ್ತಿದ್ದಂತೆಯೇ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ತಮ್ಮ ಬೇಡಿಕೆಗಳ ಈಡೇರಿಕೆಗೆ
ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಿವಮೊಗ್ಗ ಜಿಲ್ಲೆಯ ನೀಲಮ್ಮ ಅವರ ಸಾವಿಗೆ ರಾಜ್ಯ ಬಿಜೆಪಿ ಸರ್ಕಾರದ
ಹೇಡಿತನ ಕಾರಣ. ಮೃತರ ಕುಟುಂಬಕ್ಕೆ ಕೂಡಲೇ
ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸುತ್ತೇನೆ.
ಕಳೆದ ಮೂರು ದಿನಗಳಿಂದ ಚಳಿ, ಬಿಸಿಲು ಎನ್ನದೆ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ
ನಡೆಸುತ್ತಿದ್ದಾರೆ. ಕನಿಷ್ಠ ಪಕ್ಷ ಅವರ ಸಮಸ್ಯೆಯನ್ನು
ಆಲಿಸುವ ಸೌಜನ್ಯವಾದರೂ ರಾಜ್ಯ ಸರ್ಕಾರಕ್ಕೆ ಬೇಡವೇ..!!??
ಮಾತುಕತೆ ಮೂಲಕ ಅಂಗನವಾಡಿ ಕಾರ್ಯಕರ್ತೆಯರ
ಸಮಸ್ಯೆ ಬಗೆಹರಿಸುವ ಪ್ರಯತ್ನವನ್ನೇ ಮಾಡದೆ, ಏಕಾಏಕಿ
ಪ್ರತಿಭಟನಾನಿರತರ ಮೇಲೆ ಬಲಪ್ರಯೋಗ ಮಾಡುವುದು,
ಬಂಧಿಸುವುದು ರಾಜ್ಯ ಸರ್ಕಾರದ ದರ್ಪತನವನ್ನು
ತೋರುತ್ತದೆ ಎಂದು ಕಿಡಿಕಾರಿದ್ದಾರೆ.
ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಿವಮೊಗ್ಗ ಜಿಲ್ಲೆಯ ನೀಲಮ್ಮ ಅವರ ಸಾವಿಗೆ ರಾಜ್ಯ @BJP4Karnataka ಸರ್ಕಾರದ ಹೊಣೆಗೇಡಿತನ ಕಾರಣ. ಮೃತರ ಕುಟುಂಬಕ್ಕೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸುತ್ತೇನೆ. 1/3
— Siddaramaiah (@siddaramaiah) January 20, 2023


























