ಪುತ್ತೂರು : ಸಾರ್ವಜನಿಕ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಇಲಾಖೆ ಪುತ್ತೂರು ಇದರ ವತಿಯಿಂದ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರ ಅಧ್ಯಕ್ಷತೆಯಲ್ಲಿ ಪುತ್ತೂರು ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆ ದ.ಕ.ಜಿಂ.ಪ. ಪ್ರೌಢಶಾಲೆ ಪಾಪೆಮಜಲು ಇಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ತಾಲೂಕು ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಬೋರ್ಕರ್, ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಅನಿತಾ ಹೇಮನಾಥ ಶೆಟ್ಟಿ, ಸಹಾಯಕ ಆಯುಕ್ತರಾದ ಯತೀಶ್ ಉಳ್ಳಾಲ್, ತಹಶೀಲ್ದಾರ್, ರಮೇಶ್ ಬಾಬು, ನಗರ ಸಭಾ ಪೌರಾಯುಕ್ತರಾದ ಶ್ರೀಮತಿ ರೂಪಾ ಶೆಟ್ಟಿ, ಡಿವೈಎಸ್ಪಿ ಡಾ.ಗಾನ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್, ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಮತ್ತು ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.