ಪುತ್ತೂರು: ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಕ್ಷಯ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ‘SPYRO-2023’ ಜ.24 ರಂದು ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರಿನ ಅಸಿಸ್ಟೆಂಟ್ ಕಮಿಷನರ್ ಗಿರೀಶ್ ನಂದನ್ ರವರು ನೆರವೇರಸಲಿದ್ದಾರೆ.
ಅಧ್ಯಕ್ಷತೆಯನ್ನು ಅಕ್ಷಯ ಕಾಲೇಜಿನ ಛೇರ್ಮನ್ ಜಯಂತ್ ನಡುಬೈಲು ರವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಂಬೆಟ್ಟು ಸರಕಾರಿ ಪಿಯು ಕಾಲೇಜಿನ ಪ್ರಾಂಶುಪಾಲರಾದ ಧರ್ಣಪ್ಪ ಗೌಡ ಕೆ, ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರವೀಣ್ ಕುಮಾರ್ ಕುದಮಾರ ಹಾಗೂ ಅತಿಥಿಗಳಾಗಿ ಯುವ ಸಬಲೀಕರಣ ಮತ್ತು ಪುತ್ತೂರು ತಾಲೂಕು ಕ್ರೀಡಾಂಗಣದ ಮೇಲ್ವಿಚಾರಕರಾದ ಶ್ರೀಕಾಂತ್ ಪೂಜಾರಿ ಬಿರಾವ್, ಪಟ್ಟೆ ಎಜುಕೇಶನಲ್ ಇನ್ಸ್ಟಿಟ್ಯೂಷನ್ಸ್ ನ ದೈಹಿಕ ಶಿಕ್ಷಣ ಶಿಕ್ಷಕರಾದ ಮೋನಪ್ಪ ಎಂ. ರವರು ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..