ಪುತ್ತೂರು: ತಾಲೂಕಿನ ಆರ್ಯಾಪು ಗ್ರಾಮದ ಕುಂಜೂರುಪಂಜ ನಿವಾಸಿಗಳಿಗೆ ಕುಡಿಯುವ ನೀರು ಸರಬರಾಜು ಆಗದೇ ಸುಮಾರು 10,12 ದಿನಗಳೇ ಕಳೆದಿದ್ದು, ಈ ಬಗ್ಗೆ ಪಂಚಾಯತ್ ನಲ್ಲಿ ತಿಳಿಸಿದಾಗ ಮಾಡಿಕೊಡುವುದಾಗಿ ಹೇಳುತ್ತಾರೆಯೇ ಹೊರತು ಯಾವುದೇ ರೀತಿಯ ಕ್ರಮಕೈಗೊಂಡಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ನೀರಿನ ಸಮಸ್ಯೆಯ ಬಗ್ಗೆ ಪಂಚಾಯತ್ ನವರಿಗೆ, ಅಭಿವೃದ್ಧಿ ಅಧಿಕಾರಿಗೆ, ಶಾಸಕರಿಗೆ ತಿಳಿಸಿದ್ದೇವೆ. ಸರಿ ಮಾಡಿಕೊಡುವುದಾಗಿ ತಿಳಿಸಿದ್ದಾರೆಯೇ ವಿನಃ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಬೇಸರ ವ್ಯಕ್ತ ಪಡಿಸುತ್ತಿದ್ದಾರೆ.

ನೀರಿನ ಸಮಸ್ಯೆ ಬಗ್ಗೆ ತಿಳಿದ ಅಶೋಕ್ ಕುಮಾರ್ ರೈ ಅವರು ನಮಗೆ ತಾತ್ಕಾಲಿಕವಾಗಿ ಕುಡಿಯುವ ನೀರಿನ ಸರಬರಾಜು ಮಾಡುತ್ತಿರುವುದಾಗಿ ಸಾರ್ವಜನಿಕರು ತಿಳಿಸಿದ್ದಾರೆ.
ತಾವೇ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿದ ಅಶೋಕ್ ಕುಮಾರ್ ರೈ ರವರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಬಳಿ ಫೋನ್ ಮೂಲಕ ಮಾತನಾಡಿದ್ದು, ಒಂದು ವಾರಗಳಿಂದ ಜನ ನೀರಿಲ್ಲದೆ ಕಷ್ಟ ಪಡುತ್ತಿದ್ದಾರೆ. ಶೀಘ್ರ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದು, ಈ ವೇಳೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬೋರ್ ವೆಲ್ ಡ್ರೈ ಆಗಿರುವ ಬಗ್ಗೆ ಮಾಹಿತಿ ನೀಡಿದ್ದು, ಶೀಘ್ರ ಈ ಬಗ್ಗೆ ಕ್ರಮ ಕೈಗೊಂಡಿದ್ದು ನೀರಿನ ವ್ಯವಸ್ಥೆ ಕಲ್ಪಿಸಿಕೊಡುವುದಾಗಿ ತಿಳಿಸಿದ್ದಾರೆ.
ನೀರಿನ ಸಮಸ್ಯೆ ಬಗೆಹರಿಯುವ ತನಕ ಟ್ಯಾಂಕರ್ ಮೂಲಕ ನಿವಾಸಿಗಳಿಗೆ ನೀರು ಸರಬರಾಜು ಮಾಡುವುದಾಗಿ ಅಶೋಕ್ ರೈ ರವರು ತಿಳಿಸಿದ್ದು, ಶೀಘ್ರ ವ್ಯವಸ್ಥೆ ಕಲ್ಪಿಸುವಂತೆ ಪಿಡಿಒ ಅವರ ಬಳಿ ತಿಳಿಸಿದ್ದಾರೆ..


























