ಕಡಬ: ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.
ಕಡಬ ತಾಲೂಕಿನ ಕುಂತೂರು ಗ್ರಾಮದ ಸಾಲೆತ್ತಡ್ಕದ ರಝಿಕ್ ಬಂಧಿತ ಆರೋಪಿ.

ಈತನ ವಿರುದ್ಧ ಪುತ್ತೂರು ನಗರ ಠಾಣೆ, ಉಪ್ಪಿನಂಗಡಿ, ಸುಳ್ಯ, ಕೊಣಾಜೆ ಹಾಗೂ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಜ.25 ರಂದು ಈತನನ್ನು ಪತ್ತೆ ಹಚ್ಚಿ ಠಾಣೆಗೆ ಕರೆದುಕೊಂಡು ಬಂದು ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿಎಸ್, ಕಡಬ ಠಾಣಾ ಎಸ್.ಐ ಆಂಜನೇಯ ರೆಡ್ಡಿ ರವರ ಮಾರ್ಗದರ್ಶನದಲ್ಲಿ ಕಡಬ ಠಾಣಾ ಎ ಎಸ್ ಐ ಸುರೇಶ್ ಮತ್ತು ಇಲಾಖೆ ಜೀಪ್ ಚಾಲಕ ನಾರಾಯಣ ಪಾಟಾಳಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

























