ಪುತ್ತೂರು: ಕೊಡಿಪ್ಪಾಡಿ ಗ್ರಾಮದ ಕಲ್ಲಂದಡ್ಕ ನಿವಾಸಿಗಳಿಗೆ ಕೆಲ ದಿನಗಳಿಂದ ಕುಡಿಯುವ ನೀರಿನ ಸರಬರಾಜು ಸರಿಯಾಗಿ ಆಗದೆ ಸಂಕಷ್ಟ ಅನುಭವಿಸುತ್ತಿದ್ದು, ಈ ಬಗ್ಗೆ ಅರಿತ ಅಶೋಕ್ ಕುಮಾರ್ ರೈ ಕೋಡಿಂಬಾಡಿ ರವರು ಅಲ್ಲಿನ ನಿವಾಸಿಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಪೂರೈಸಿದರು.

ಕೊಡಿಪ್ಪಾಡಿ ಗ್ರಾಮದ ಕಲ್ಲಂದಡ್ಕ ನಿವಾಸಿಗಳ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಅರಿತ ಅಶೋಕ್ ಕುಮಾರ್ ರೈ ಕೋಡಿಂಬಾಡಿ ರವರು ಟ್ಯಾಂಕರ್ ಮೂಲಕ ನಿವಾಸಿಗಳಿಗೆ ಕುಡಿಯುವ ನೀರನ್ನು ಪೂರೈಕೆ ಮಾಡುತ್ತಿದ್ದು, ಅವರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಬೇಸಿಗೆಕಾಲದ ಪ್ರಾರಂಭದಲ್ಲಿಯೇ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುವ ಹಾಗಾದರೆ ಮುಂದಿನ ದಿನಗಳಲ್ಲಿ ಯಾವ ರೀತಿಯಾಗಲಿದೆ. ಈ ಬಗ್ಗೆ ಶೀಘ್ರ ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ..





























