ಪುತ್ತೂರು : ಹಿಂದೂ ಜಾಗರಣ ವೇದಿಕೆ ಶಿವಾಜಿ ಶಾಖೆ ಪುರುಷರಕಟ್ಟೆ ವತಿಯಿಂದ ಪುರೋಹಿತ ನಾರಾಯಣ ಐತಾಳ್ ನರಿಮೊಗರು ರವರ ನೇತೃತ್ವದಲ್ಲಿ ‘ಸಾರ್ವಜನಿಕ ಶ್ರೀ ದುರ್ಗಾ ಪೂಜೆ ಮತ್ತು ಅನ್ನಸಂತರ್ಪಣೆ’ ಜ.28 ರಂದು ಸಂಜೆ 6.30 ರಿಂದ ಪುರುಷರಕಟ್ಟೆ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯ ಮುಂಭಾಗದಲ್ಲಿ ನಡೆಯಲಿದೆ.
ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಹಿಂದೂ ಜಾಗರಣ ವೇದಿಕೆ ಪ್ರಾಂತ ಸಮಿತಿ ಸದಸ್ಯರಾದ ಉಲ್ಲಾಸ್ ಕೆ.ಟಿ. ರವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಉಪತಹಶೀಲ್ದಾರರಾದ ಮೋನಪ್ಪ ಪುರುಷ ಮುಗೇರಡ್ಕ ರವರು ವಹಿಸಲಿದ್ದಾರೆ.
ಅತಿಥಿಗಳಾಗಿ ಪುತ್ತೂರು ಜಿಲ್ಲಾ ನ್ಯಾಯ ಜಾಗರಣ ಸಂಯೋಜಕ್ ರಾಜೇಶ್ ಬೊಳ್ಳುಕಲ್ಲು, ಹಿಂದೂ ಜಾಗರಣ ವೇದಿಕೆ ಪುತ್ತೂರು ತಾಲೂಕು ಸಂಪರ್ಕ ಪ್ರಮುಖ್ ಪ್ರಜ್ವಲ್ ಈಶ್ವರಮಂಗಲ ರವರು ಆಗಮಿಸಲಿದ್ದಾರೆ.
ಯೋಧರಿಗೆ ಹಾಗೂ ನಾಟಿ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ರಾತ್ರಿ 9 ಗಂಟೆಯಿಂದ ಅನ್ನಸಂತರ್ಪಣೆ ನಡೆಯಲಿದೆ.
ರಾತ್ರಿ 9.30 ರಿಂದ ವಿಶ್ವಕಲಾನಿಕೇತನ ಇನ್ಸ್ಟಿಟ್ಯೂಷನ್ ಆಫ್ ಆರ್ಟ್ಸ್ & ಕಲ್ಚರಲ್ (ರಿ.) ಪುತ್ತೂರು ಇವರಿಂದ, ಗುರು ಕರ್ನಾಟಕ ಕಲಾಶ್ರೀ ವಿದುಷಿ ನಯನಾ ವಿ. ರೈ ಕುದ್ಕಾಡಿ ಮತ್ತು ವಿದುಷಿ ಸ್ವಸ್ತಿಕಾ ಆರ್. ಶೆಟ್ಟಿ ರವರ ನಿರ್ದೇಶನದಲ್ಲಿ ನೃತ್ಯ ವೈವಿಧ್ಯ ಸಾಂಸ್ಕೃತಿಕ ಕಾರ್ಯಕ್ರಮ ಮೂಡಿಬರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..


























