ಭೋಪಾಲ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ತಾಲೀಮು ನಡೆಸುತ್ತಿದ್ದ ಭಾರತದ ವಾಯು ಸೇನೆಯ ವಿಮಾನಗಳಾದ ಸುಖೋಯ್-30 (Sukhoi-30) ಮತ್ತು ಮಿರಾಜ್ 2000 (Mirage 2000) ವಿಮಾನಗಳು ಪತನಗೊಂಡಿದೆ.
ಎರಡು ವಿಮಾನಗಳು ಮಧ್ಯಪ್ರದೇಶದ ಗ್ವಾಲಿಯರ್ ವಾಯು ನೆಲೆಯಿಂದ ತಾಲೀಮು ನಡೆಸುತ್ತಿದ್ದವು. ಆಗಸದಲ್ಲಿ ಹಾರಾಟ ನಡೆಸುತ್ತಿದ್ದಂತೆ ಡಿಕ್ಕಿ ಹೊಡೆದುಕೊಂಡು ಮಧ್ಯಪ್ರದೇಶದ ಮೊರೆನಾ ಬಳಿ ಪತನಗೊಂಡಿದೆ.
ಯುದ್ದ ವಿಮಾನಗಳು ಪತನಗೊಂಡಿರುವ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಸಾಗುತ್ತಿದೆ. ಸುಖೋಯ್ ವಿಮಾನದಲ್ಲಿ ಇಬ್ಬರು ಪೈಲಟ್ ಮತ್ತು ಮೀರಾಜ್‍ನಲ್ಲಿ ಓರ್ವ ಪೈಲಟ್ ಇದ್ದ ಬಗ್ಗೆ ಮಾಹಿತಿ ಹೊರಬಂದಿದ್ದು, ಸದ್ಯ ಇಬ್ಬರು ಪೈಲಟ್ ಸುರಕ್ಷಿತವಾಗಿರುವ ಬಗ್ಗೆ ವರದಿಯಾಗಿದೆ. ಘಟನೆಯ ತನಿಖೆಗೆ ಐಎಎಫ್ ಸೂಚಿಸಿದೆ.