ಮಂಗಳೂರು: ನಗರದಲ್ಲಿ ಇತ್ತೀಚೆಗೆ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿದ್ದ 13 ಮಂದಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ವಿವಿಧ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 24 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಉಳಿದ 11 ಮಂದಿ ಕೂಡ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ..

























