ಮಂಗಳೂರು: ನಗರದ ಬಿಜೈನ ಅಪಾರ್ಟ್ಮೆಂಟ್ ಒಂದರಲ್ಲಿ ದಂಪತಿ ಮೃತದೇಹ ಪತ್ತೆಯಾಗಿದೆ.
ಬಿಜೈ ನಿವಾಸಿಗಳಾದ ದಿನೇಶ್ (65) ಹಾಗೂ ಶೈಲಜಾ (64) ಮೃತಪಟ್ಟ ದಂಪತಿಗಳು ಎಂದು ತಿಳಿದು ಬಂದಿದೆ.
ಶೈಲಜಾ ಅನಾರೋಗ್ಯ ಹಿನ್ನೆಲೆಯಲ್ಲಿ ಹಾಸಿಗೆ ಹಿಡಿದಿದ್ದು, ಇವರನ್ನು ನೋಡಿಕೊಳ್ಳಲು ಹೋಮ್ ನರ್ಸ್ ಬಂದು ಹೋಗುತ್ತಿದ್ದರು.
ದಿನೇಶ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಹೆಂಡತಿ ಮೃತಪಟ್ಟಿರುವ ಪಕ್ಕದ ಕೋಣೆಯಲ್ಲೇ ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೆಯಲ್ಲಿ ದಂಪತಿಗಳು ಮಾತ್ರ ವಾಸ ಮಾಡುತ್ತಿದ್ದು, ಮಕ್ಕಳು ಹೊರ ದೇಶದಲ್ಲಿ ಉದ್ಯೋಗದಲ್ಲಿದ್ದಾರೆ ಎನ್ನಲಾಗಿದೆ. ಉರ್ವ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ..