ಮಂಗಳೂರು : ಪಾರ್ಸೆಲ್ ಡೆಲಿವರಿ ಅಂಗಡಿಗೆ ನುಗ್ಗಿದ ಕಳ್ಳರು ಡೆಲಿವರಿಗೆ ಇಟ್ಟಿದ ಬೆಲೆಬಾಳುವ ಪಾರ್ಸೆಲ್ ಹಾಗೂ ಲಕ್ಷಾಂತರ ನಗದು ಹಣವನ್ನು ಲೂಟಿ ಮಾಡಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಮುಕ್ಕ ಚೆಕ್ ಪೋಸ್ಟ್ ಬಳಿ ನಡೆದಿದೆ.

ಮುಕ್ಕ ಚೆಕ್ ಪೋಸ್ಟ್ ಬಳಿ ಇರುವ ಡೆಲಿವರಿ ಕಚೇರಿ ಇದಾಗಿದ್ದು, ಮೂರು ಲಕ್ಷಕ್ಕೂ ಅಧಿಕ ಮೊತ್ತದ ನಗದು ಹಾಗೂ ವಿತರಣೆಗೆ ಶೇಖರಿಸಿಟ್ಟ ಅಮೂಲ್ಯ ವಸ್ತುಗಳನ್ನು ದೋಚಲಾಗಿದೆ ಎನ್ನಲಾಗಿದೆ.
ಸ್ಥಳಕ್ಕೆ ಸುರತ್ಕಲ್ ಠಾಣಾ ಪೊಲೀಸರು, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ..

























