ಬಂಟ್ವಾಳ : ಆಕಸ್ಮಿಕವಾಗಿ ಗುಡ್ಡೆಕ್ಕೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೆಲಿಂಜ ಕಲ್ಮಲೆ ವೀರಕಂಭ ರಕ್ಷಿತಾರಣ್ಯದಲ್ಲಿ ನಡೆದಿದೆ.
ಮೀಸಲು ಅರಣ್ಯ ಇಲಾಖೆಗೆ ಸೇರಿದ ಗುಡ್ಡ ಇದಾಗಿದ್ದು, ಕಾಡಿನಲ್ಲಿ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ವಿವಿಧ ಜಾತಿಯ ಮರಗಳಿದ್ದು, ಬಹುತೇಕ ಮರಗಳು ಬೆಂಕಿಗಾಹುತಿಯಾಗಿವೆ ಎನ್ನಲಾಗಿದೆ.

ಕಾಡು ಪ್ರಾಣಿಗಳು ಕೂಡಾ ಇದ್ದು ಸಣ್ಣ ಸಣ್ಣ ಪ್ರಾಣಿ-ಪಕ್ಷಿಗಳು ಜೀವ ಕಳೆದುಕೊಂಡರೆ, ಉಳಿದ ಪ್ರಾಣಿಗಳು ಜೀವಭಯದಿಂದ ಕಾಡು ಬಿಟ್ಟು ಹೋಗುವ ಸ್ಥಿತಿ ನಿರ್ಮಾಣವಾಗಿದೆ.
ಕಾಡಿನ ಮಧ್ಯೆ ಇರುವ ವಿದ್ಯುತ್ ಟ್ರಾನ್ಸ್ಫರ್ ನಿಂದ ಬೆಂಕಿ ಹತ್ತಿಕೊಂಡಿರಬಹುದು ಎಂಬ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಆದರೇ ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ…