ಪುತ್ತೂರು: ಹಿಂದೂ ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿ ದಿ. ಕಾರ್ತಿಕ್ ಮೇರ್ಲ ರವರ ತಂದೆ ಆರ್ಯಾಪು ಮೇರ್ಲದ ರಮೇಶ್ ಸುವರ್ಣ ರವರು ನಿಧನರಾದರು.

ರಮೇಶ್ ಸುವರ್ಣ ರವರು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಮ್ಯಾನೇಜರ್ ಆಗಿ ಕಾರ್ಯಾ ನಿರ್ವಹಿಸುತ್ತಿದ್ದು, ಕೆಲ ವರುಷಗಳ ಹಿಂದೆ ನಿವೃತ್ತರಾಗಿದ್ದರು.
ಮೃತರು ಮನೆಯವರು ಮತ್ತು ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರವು ಇಂದು ಮನೆಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
2019ರಲ್ಲಿ ಸೆ.3 ರಂದು ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ನಡೆಯುತ್ತಿದ್ದ ಯಕ್ಷಗಾನವನ್ನು ವೀಕ್ಷಿಸುತ್ತಿದ್ದ ಹಿಂದೂ ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿ ಕಾರ್ತಿಕ್ ಮೇರ್ಲ ರನ್ನು ಹತ್ಯೆ ಮಾಡಲಾಗಿತ್ತು.