ಪುತ್ತೂರು: ಪರ್ಲಡ್ಕ ನಿವಾಸಿ, ಬೆಟ್ಟಂಪಾಡಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಮಹೇಶ್ ಫೆ.3 ರಂದು ಹೃದಯಾಘಾತದಿಂದ ನಿಧನರಾದರು.

ಮಹೇಶ್ ರವರಿಗೆ ಇಂದು ಬೆಳಿಗ್ಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆ ತರಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ..