ಮಂಗಳೂರು: ನಗರದ ಜಪ್ಪಿನಮೊಗರು ಪ್ರದೇಶದ ಗ್ಯಾರೇಜ್ ಒಂದರಲ್ಲಿ ಶುಕ್ರವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು , ಹಲವು ವಾಹನಗಳಿಗೆ ಬೆಂಕಿ ತಗುಲಿ ಭಸ್ಮವಾಗಿದೆ.
ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಹತ್ತಾರು ವಾಹನಗಳು ಬೆಂಕಿಗಾಹುತಿಯಾಗಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿರುವುದಾಗಿ ವರದಿಯಾಗಿದೆ.