ಪುತ್ತೂರು: ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಸಂಪ್ಯ ಅಕ್ಷಯ ಕಾಲೇಜು ಬಳಿ ನಡೆದಿದೆ.

ಕುಂಬ್ರ ಕಡೆಯಿಂದ ಬರುತ್ತಿದ್ದ ರಿಕ್ಷಾಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ರಿಕ್ಷಾದಲ್ಲಿದ್ದ ಇಬ್ಬರಿಗೆ ಗಾಯವಾಗಿದೆ ಎಂದು ವರದಿಯಾಗಿದೆ.

ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ..