ವಿಟ್ಲ: ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ಖದೀಮರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ವಿಟ್ಲ ಸಮೀಪದ ಕಾನತ್ತಡ್ಕ ಎಂಬಲ್ಲಿ ನಡೆದಿದೆ.
ಕಾನತ್ತಡ್ಕ ಶಾಲೆಯ ಸಮೀಪದ ರಹೀಮ್ ಖಾನ್ ಎಂಬವರ ಮನೆಯಲ್ಲಿ ಕಳವುಗೈದಿದ್ದು, ಮನೆಯವರೆಲ್ಲಾ ಮದುವೆ ಕಾರ್ಯಕ್ರಮದ ನಿಮಿತ್ತ ತೆರಳಿದ್ದರು.

ಮನೆಗೆ ನುಗ್ಗಿದ ಖದೀಮರು ಸುಮಾರು ಹದಿನೈದು ಪವನ್ ಚಿನ್ನ ಹಾಗೂ ಒಂದು ಲಕ್ಷ ನಗದನ್ನು ಕಳವುಗೈದಿದ್ದು, ಮನೆ ಮಂದಿ ಮನೆಗೆ ಬಂದಾಗ ಹಿಂಬದಿಯ ಬಾಗಿಲು ಮುರಿಯಲಾಗಿತ್ತು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ..