ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಕಾರ್ಕಾಳ ಕ್ಷೇತ್ರದಿಂದಲೇ ಕಣಕ್ಕಿಳಿಯುವುದಾಗಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದ ಸಚಿವ ಸುನಿಲ್ ಕುಮಾರ್ ವಿಚಾರವಾಗಿ ಮಾತನಾಡಿ, ರಾಜಕೀಯ ಹಿನ್ನಡೆಯ ಭೀತಿ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಕಾರ್ಕಳದಿಂದ ಸ್ಪರ್ಧಿಸುತ್ತಿರುವುದು ಹಿಂದೂ ಪರ ರಾಜಕೀಯ ಪಕ್ಷಕ್ಕೆ ಹಿನ್ನೆಡೆಯಾಗಲಿದೆ. ಇದನ್ನು ಅವರು ತಿಳಿದುಕೊಳ್ಳಬೇಕು ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಜಿಲ್ಲೆಯ ಗಂಗಾವತಿಯ ಶ್ರೀರಾಮನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಸರಕಾರ ಬಂದ ನಂತರ ಕೇವಲ ಒಬ್ಬ ಹಿಂದೂ ಕಾರ್ಯಕರ್ತನ ಹತ್ಯೆಯಾಗಿದೆ. ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಒಟ್ಟು 18 ಹಿಂದು ಕಾರ್ಯಕರ್ತರ ಹತ್ಯೆಯಾಗಿತ್ತು. ಬಿಜೆಪಿ ಸರಕಾರ ಬಂದ ನಂತರ ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದಿದೆ. ಹಿಜಾಬ್ ಕುರಿತು ಕಾಯ್ದೆ ರೂಪಿಸಿದೆ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರ ಬೇಕಾದರೂ ಸ್ಪರ್ಧಿಸಬಹುದು. ಹೀಗಾಗಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಎಲ್ಲಿ ಬೇಕಾದರೂ ಸ್ಪರ್ದಿಸಲಿ. ಬಿಜೆಪಿಗೆ ರಾಜ್ಯದ 224 ಕ್ಷೇತ್ರ ಇದೆ. ಚುನಾವಣೆಯ ಹತ್ತಿರ ಬರಲಿ ಎಲ್ಲವೂ ಗೊತ್ತಾಗಲಿದೆ ಎಂದು ಸುನಿಲ್ ಕುಮಾರ್ ಹೇಳಿದ್ದಾರೆ..