ಪುತ್ತೂರು: ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೋರ್ವರೊಂದಿಗೆ ಗಲಾಟೆ ಮಾಡಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮುಡ್ನೂರು ಗ್ರಾಮದ ಬೀರ್ನಹಿತ್ತಿಲು ನಿವಾಸಿ ರಾಜೇಶ್
ಬಂಧಿತ ಆರೋಪಿ.
ರಾಜೇಶ್ 2014ರ ಆ.13 ರಂದು ಪುತ್ತೂರು ನಗರ ಪೊಲೀಸ್ ಠಾಣೆಯ ಕರ್ತವ್ಯದಲ್ಲಿದ್ದ ಸುಬ್ಬ ಪಾಟಾಳಿ ಎಂಬವರೊಂದಿಗೆ
ಗಲಾಟೆ ಮಾಡಿ ಕಚ್ಚಿದ್ದ. ಆರೋಪಿ ರಾಜೇಶ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ಹಾಜರಾಗದೆ
ತಲೆಮರೆಸಿಕೊಂಡಿದ್ದರಿಂದಾಗಿ ಆರೋಪಿ ರಾಜೇಶ್ ಬಂಧನಕ್ಕೆ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು.
ಫೆ.6 ರಂದು ಪುತ್ತೂರು ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.