ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಭಾರತ ಸೇವಾದಳ ಜಿಲ್ಲಾ ಸಮಿತಿ ದಕ್ಷಿಣ ಕನ್ನಡ ಭಾರತ ಸೇವಾದಳ ತಾಲೂಕು ಸಮಿತಿ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಪುತ್ತೂರು ತಾಲೂಕು, ಪುತ್ತೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರು ಇದರ ಜಂಟಿ ಆಶ್ರಯದಲ್ಲಿ ಪುತ್ತೂರು ತಾಲೂಕು ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ, ಭಾರತ ಸೇವಾದಳ ಜಿಲ್ಲಾ ಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ-2022-23 ಫೆ.8 ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರ್ ನಲ್ಲಿ ನಡೆಯಲಿದೆ.
ಫೆ.8 ರಂದು ಬೆಳಿಗ್ಗೆ 8 ಗಂಟೆಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಚನಿಲ ತಿಮ್ಮಪ್ಪ ಶೆಟ್ಟಿ ರವರು ರಾಷ್ಟ್ರ ಧ್ವಜಾರೋಹಣದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ಶಾಸಕ ಸಂಜೀವ ಮಠಂದೂರು ರವರ ಸಹಿತ ಹಲವು ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.
ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ..