ನೆಲ್ಯಾಡಿ : ಪ್ರಜಾ ಧ್ವನಿ ಯಾತ್ರೆ ಕಾರ್ಯಕ್ರಮದ ಬ್ಯಾನರ್ ಅಳವಡಿಕೆ ವಿಚಾರ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ ನಡೆದಿದೆ ಎಂದು ವರದಿಯಾಗಿದೆ.
2 ನಾಯಕರ ಬ್ಯಾನರ್ ಅಳವಡಿಕೆ ವಿಚಾರವಾಗಿ ಮಾತಿಗೆ ಮಾತು ಬೆಳೆದು ಗಲಾಟೆಯಾದ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಫೆ. 5 ರಂದು ಪ್ರಜಾ ಧ್ವನಿ ಕಾರ್ಯಕ್ರಮ ನೆಲ್ಯಾಡಿ ಬಳಿ ಹಮ್ಮಿಕೊಳ್ಳಲಾಗಿತ್ತು ಅದರಂತೆ ಫೆ.4 ರಂದು ಕಾರ್ಯಕರ್ತರು ಬ್ಯಾನರ್ ಅಳವಡಿಸುವ ಸಂದರ್ಭ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಕಾಂಕ್ಷಿ ಅಭ್ಯರ್ಥಿಗಳ ಅನುಯಾಯಿಗಳು ಬ್ಯಾನರ್ ವಿಚಾರವಾಗಿ ಜಗಳವಾಡಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯದಾದ್ಯಂತ ಕಾಂಗ್ರೆಸ್ ಪಕ್ಷದ ಪ್ರಜಾ ಧ್ವನಿ ಯಾತ್ರೆಯೂ ನಡೆಯುತ್ತಿದ್ದು, ಅದರ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಜಾ ಧ್ವನಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ಫೆ.5 ರಂದು ನೆಲ್ಯಾಡಿಯಲ್ಲಿ ನಿಗದಿಯಾಗಿತ್ತು. ಅದರ ಭಾಗವಾಗಿ ನೆಲ್ಯಾಡಿಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯೋರ್ವರು ಬ್ಯಾನರ್ ನ್ನು ಕಾಂಗ್ರೆಸ್ ಕಾರ್ಯಕರ್ತರು ಕಟ್ಟುತ್ತಿರುವಾಗ ಮತ್ತೊಬ್ಬ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ, ಹಾಗೂ ಬೆಂಬಲಿಗರು ಬ್ಯಾನರ್ ಅಳವಡಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಸ್ವಪಕ್ಷದ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದಿದೆ ಎನ್ನಲಾಗಿದೆ.
ಈ ಘಟನೆಯ ಮಧ್ಯ ಪ್ರವೇಶ ಮಾಡಿದ ನೆಲ್ಯಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಇತ್ತಂಡಗಳನ್ನು ಸಮಾಧಾನಪಡಿಸಿದ್ದಾರೆ ಎಂದು ತಿಳಿದು ಬಂದಿದೆ ಇನ್ನು ವಿಚಾರ ಪಕ್ಷದ ಪ್ರಮುಖರಿಗೆ ತಿಳಿದು ಬಂದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.