ಮೂಲ್ಕಿ : ಸಮೀಪದ ಎಸ್ ಕೋಡಿ ಎಂಬಲ್ಲಿ ಉಪನ್ಯಾಸಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಫೆ.6 ರಂದು ಸೋಮವಾರ ನಡೆದಿದೆ.
ಮೃತ ಮಹಿಳೆಯನ್ನು ಸ್ಥಳೀಯ ನಿವಾಸಿ ಅಮಿತಾ ಬಿವಿ (34)ಎಂದು ಗುರುತಿಸಲಾಗಿದೆ.
ಮೃತ ಮಹಿಳೆ ಅಮಿತಾ ಮದುವೆಯಾಗಿ 12 ವರ್ಷಗಳಾಗಿದ್ದು ತಾಯಿ ಮನೆಯಿಂದ ಬಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ತಮ್ಮ ಬೆಡ್ ರೂಮ್ ನ ಫ್ಯಾನ್ ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮುಲ್ಕಿ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಮೃತರು ಪತಿ ಹಾಗೂ ಎಂಟು ವರ್ಷದ ಪುತ್ರಿಯನ್ನು ಅಗಲಿದ್ದಾರೆ.
ಅಮಿತಾ ಅವರು ಬಂಟ್ವಾಳ ತಾಲೂಕಿನ ರಾಯಿ ನಿವಾಸಿ ಬಿ.ಎಸ್.ಎನ್.ಎಲ್ ಉದ್ಯೋಗಿ ವೀರಪ್ಪ ರವರ ಪುತ್ರಿಯಾಗಿದ್ದಾಳೆ. ಅತ್ಯಂತ ಕ್ರಿಯಾಶೀಲ ಮಹಿಳೆಯಾಗಿದ್ದು, ಇವರು ವಾಮದಪದವು ಕಾಲೇಜಿನಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.
ಸೋಮವಾರದಂದು ಕೂಡ ಕಾಲೇಜಿಗೆ ಆಗಮಿಸಿದ್ದ ಅಮಿತ ಸಂಜೆ ವೇಳೆ ಗಂಡನ ಮನೆಗೆ ತೆರಳಿದ್ದರು. ಅಲ್ಲಿ ಹೋಗಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಆತ್ಮಹತ್ಯೆ ಗೆ ಇನ್ನೂ ಕೂಡ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.