ಪುತ್ತೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ.11 ರಂದು ಪುತ್ತೂರಿಗೆ ಆಗಮಿಸಲಿದ್ದು, ಅವರಿಗೆ ಸ್ವಾಗತ ಕೋರಿ ಹಲವು ಬ್ಯಾನರ್ ಗಳು ರಾರಾಜಿಸುತ್ತಿದ್ದು, ಅದರಲ್ಲಿ ವಿಶೇಷ ಎನ್ನುವಂತೆ ದರ್ಬೆ ಬೈಪಾಸ್ ರಸ್ತೆಯಲ್ಲಿ ಕೈಯಲ್ಲಿ ಬಿಜೆಪಿ ಧ್ವಜ ಹಿಡಿದ ಅಮಿತ್ ಶಾ ಅವರ ಪ್ರತಿಮೆ ಮಾದರಿಯಲ್ಲಿನ ಬೃಹತ್ ಕಟೌಟ್ ರಾರಾಜಿಸುತ್ತಿದೆ.
ಪದ್ಮಶ್ರೀ ಗ್ರೂಪ್ ನ ಸೀತಾರಾಮ ರೈ ಕೆದಂಬಾಡಿಗುತ್ತು ಅವರ ನೇತೃತ್ವದಲ್ಲಿ ಸುಮಾರು 65 ಸಾವಿರ ರೂ. ವೆಚ್ಚದಲ್ಲಿ ಆಲ್ಯೂಮಿನಿಯಮ್ ಪ್ರೇಮ್ ಅಳವಡಿಸಿ ಅಮಿತ್ ಶಾ ಅವರಿಗೆ ಸ್ವಾಗತಕೋರಿ ಕಟೌಟ್ ನಿರ್ಮಾಣ ಮಾಡಲಾಗಿದೆ.
ಅಮಿತ್ ಶಾ ಅವರ ಜೊತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ಸಂಜೀವ ಮಠಂದೂರು ಅವರಿಗೂ ಸ್ವಾಗತಕೋರಲಾಗಿದೆ.
ಈ ಕಟೌಟ್ ನಲ್ಲಿ ಎಪಿಎಂಸಿ ಮಾಜಿ ಸದಸ್ಯ ಕೃಷ್ಣಕುಮಾರ್ ರೈ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ತಾ.ಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಪದ್ಮಶ್ರೀ ಗ್ರೂಪ್ಸ್ ನ ಉದ್ಯಮಿ ಸೀತಾರಾಮ ರೈ ಕೆದಂಬಾಡಿಗುತ್ತು ರವರ ಹೆಸರು ಮತ್ತು ಫೋಟೋಗಳಿವೆ..