ಪುತ್ತೂರು : ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಲಕ್ಷ್ಮೀ ದೇವಿ ಬೆಟ್ಟ ಪುತ್ತೂರು ಇಲ್ಲಿ ಎ.23 ರಂದು ನಡೆಯಲಿರುವ ಶ್ರೀ ಮಹಾಲಕ್ಷ್ಮೀ ಅಮ್ಮನವರ ವರ್ಷಾವಧಿ ಜಾತ್ರೋತ್ಸವವು ಕೋವಿಡ್ ನಿಯಮಕ್ಕೆ ಅನುಸಾರವಾಗಿ ಸರ್ಕಾರದ ಆದೇಶದ ಮೇರೆಗೆ ಧಾರ್ಮಿಕ ವಿಧಿ ವಿಧಾನಗಳ ಮೂಲಕ ನಡೆಸಲಾಗುತ್ತದೆ.
ಧಾರ್ಮಿಕ ವಿಧಿ-ವಿಧಾನವನ್ನು ಹೊರತು ಪಡಿಸಿ (ಅರ್ಚಕರು ಹಾಗೂ ಕ್ಷೇತ್ರದ ಆಡಳಿತ ಮಂಡಳಿ ಇವರುಗಳಿಗೆ ಮಾತ್ರ ಅವಕಾಶವಿರುತ್ತದೆ) ಉಳಿದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದು ಪಡಿಸಲಾಗಿದೆ. ಭಕ್ತಾದಿಗಳು ನಮ್ಮೊಂದಿಗೆ ಸಹಕರಿಸಬೇಕು ಎಂದು ದೇವಸ್ಥಾನದ ವ್ಯವಸ್ಥಾಪನ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.