ಪುತ್ತೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಪುತ್ತೂರಿಗೆ ಆಗಮಿಸಲಿದ್ದು, ಈ ಹಿನ್ನೆಲೆ ನಗರದಲ್ಲೆಲ್ಲಾ ನಿನ್ನೆಯಿಂದಲೇ ಪೊಲೀಸ್ ಸರ್ಪಗಾವಲು ಪ್ರಾರಂಭವಾಗಿದೆ.
ಮಂಗಳೂರಿನಿಂದ ಪುತ್ತೂರಿನವರೆಗೆ ಅಲ್ಲಲ್ಲಿ ಪೊಲೀಸರು ಕಾರ್ಯ ನಿರ್ವಹಿಸುತ್ತಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸಬಾರದೆನ್ನುವ ನಿಟ್ಟಿನಲ್ಲಿ ಕಟ್ಟೆಚ್ಚರ ವಹಿಸುತ್ತಿದ್ದಾರೆ.
ದಕ್ಷಿಣ ಕನ್ನಡ ಕನ್ನಡ ಮಾತ್ರವಲ್ಲದೆ ಹೊರ ಜಿಲ್ಲೆಯ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಆಗಮಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪುತ್ತೂರಿನ ಗಲ್ಲಿ ಗಲ್ಲಿಗಳಲ್ಲಿ ಪೊಲೀಸರು ಕಾರ್ಯ ನಿರ್ವಹಿಸುತ್ತಿದ್ದು, ಪೊಲೀಸರ ಸರ್ಪಗಾವಲಿನಲ್ಲಿ ಪುತ್ತೂರು ಸುತ್ತುವರೆದಿದೆ..