ವಿಟ್ಲ: ಸಾರ್ವಜನಿಕರ ಬಹು ದಿನಗಳ ಬೇಡಿಕೆಯ ಕೂಡೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಕೆಲ ದಿನಗಳಲ್ಲಿ ನೂತನ ಕಾಂಕ್ರೀಟ್ ರಸ್ತೆಯು ಸಾರ್ವಜನಿಕರ ಓಡಾಟಕ್ಕೆ ಮುಕ್ತವಾಗಲಿದೆ.
ಅಮೃತ ನಗರೋತ್ಥಾನದಡಿಯಲ್ಲಿ ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ಈ ರಸ್ತೆ ಕಾಮಗಾರಿ ನಡೆಯಲಿದೆ.
ಕಾಮಗಾರಿಗೆ ಅನುದಾನವನ್ನು ಒದಗಿಸಿಕೊಟ್ಟ ಶಾಸಕ ಸಂಜೀವ ಮಠಂದೂರು ಮತ್ತು ಅನುದಾನ ಒದಗುವಲ್ಲಿ ಸಹಕರಿಸಿದ ಅಶೋಕ್ ಕುಮಾರ್ ಶೆಟ್ಟಿ ರವರಿಗೆ 14ನೇ ವಾರ್ಡ್ ನ ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಅಭಿನಂದಿಸಿದ್ದು, ಈ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.