ವಿಟ್ಲ: ಬೈಕ್ ಅಪಘಾತ ಸಂಭವಿಸಿ ವಿಟ್ಲ ಮೂಲದ ಯುವಕನೋರ್ವ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮೃತ ಯುವಕನನ್ನು ಮಾಣಿಲ ಗ್ರಾಮದ ಪಕಳಕುಂಜ ಬಾಳೆಕಾನ ನಿವಾಸಿ ಗೋಪಾಲಕೃಷ್ಣ ಮಣಿಯಾನಿ ಮತ್ತು ಸುಧಾಮಣಿ ದಂಪತಿಗಳ ಪುತ್ರ ಕಾರ್ತಿಕ್ ಮಣಿಯಾನಿ (24) ಎಂದು ಗುರುತಿಸಲಾಗಿದೆ.
ಕಾರ್ತಿಕ್ ಮಂಗಳೂರಿನಲ್ಲಿ ಡೆಕೋರೇಷನ್ ಕೆಲಸ ನಿರ್ವಹಿಸುತ್ತಿದ್ದು, ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅಡ್ಯಾರ್ ಬಳಿ ಅಪಘಾತ ನಡೆದಿದೆ ಎನ್ನಲಾಗಿದೆ.
ಮೃತರು ತಂದೆ, ತಾಯಿ, ಓರ್ವ ಸಹೋದರ ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.