ಪುತ್ತೂರು: ಅರುಣ್ ಕುಮಾರ್ ಪುತ್ತಿಲ ರವರು ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಸ್ಪರ್ಧಿಸುವಂತಾಬೇಕು ಹಾಗೂ ಪುತ್ತೂರಿನ ಮುಂದಿನ ಜನನಾಯಕನಾಗಬೇಕು ಎಂದು ಪುತ್ತಿಲ ರವರ ಅಭಿಮಾನಿಗಳಾದ ಗಣೇಶ್ ಬೆದ್ರಾಳ, ಪವಿತ್ರ ರೈ ಬಾಲಿಲ ರವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಲಾಯಿತು.
ಈ ಸಂದರ್ಭದಲ್ಲಿ ಅರುಣ್ ಕುಮಾರ್ ಪುತ್ತಿಲ ರವರ ಹಲವು ಅಭಿಮಾನಿಗಳು ಉಪಸ್ಥಿತರಿದ್ದರು.