ಬೆಂಗಳೂರು: 6ನೇ ವೇತನ ಆಯೋಗ ವರದಿ ಜಾರಿಗಾಗಿ ಒತ್ತಾಯಿಸಿ ಕಳೆದ 15 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ನೌಕರರು ಮುಷ್ಕರವನ್ನ ನಿನ್ನೆ ಹಿಂದಕ್ಕೆ ಪಡೆಯಲಾಗಿದೆ. ಹೀಗಾಗಿ ಇಂದಿನಿಂದ ರಾಜ್ಯದಲ್ಲಿ ಸಾರಿಗೆ ಸೇವೆ ಸಹಜ ಸ್ಥಿತಿಗೆ ಮರಳಲಿದ್ದು, ಬಸ್ಗಳ ಸಂಚಾರ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದೆ.
ಹೈಕೋರ್ಟ್ ಮನವಿಗೆ ಓಗುಟ್ಟು ಸಾರಿಗೆ ನೌಕರರು ತಮ್ಮ ಮುಷ್ಕರವನ್ನು ವಾಪಸ್ ಪಡೆದಿದ್ದು, ಇಂದಿನಿಂದ ಕೆಲಸಕ್ಕೆ ಹಾಜರಾಗುವ ವಿಶ್ವಾಸವನ್ನ ವ್ಯಕ್ತಪಡಿಸಿದ್ದಾರೆ. ಮುಷ್ಕರವನ್ನ ಕೈಬಿಟ್ಟ ಸಾರಿಗೆ ನೌಕರರಿಗೆ ಡಿಸಿಎಂ ಲಕ್ಷ್ಮಣ ಸವದಿ ಅಭಿನಂದನೆಗಳನ್ನ ತಿಳಿಸಿದ್ದಾರೆ.
ನಮ್ಮ ಸಾರಿಗೆ ನೌಕರರು ಸ್ವಯಂಪ್ರೇರಣೆಯಿಂದ ಕರ್ತವ್ಯಕ್ಕೆ ಹಾಜರಾಗಿದ್ದರಿಂದ, ಸುಮಾರು 13 ಸಾವಿರಕ್ಕೂ ಹೆಚ್ಚು ಬಸ್ಸುಗಳು ಸಂಚರಿಸಿವೆ. ಕರ್ತವ್ಯ ಪ್ರಜ್ಞೆ ಮೆರೆದವರಿಗೆ ನನ್ನ ಹಾರ್ದಿಕ ಅಭಿನಂದನೆಗಳು ಅಂತ ಅಭಿನಂದನೆಯನ್ನ ಸಲ್ಲಿಸಿದ್ದಾರೆ.
ಮುಷ್ಕರದಿಂದ 4 ನಿಗಮಗಳಿಗೆ ₹287 ಕೋಟಿ ನಷ್ಟನೌಕರರು ನಡೆಸಿದ ಮುಷ್ಕರದಿಂದ ನಾಲ್ಕು ಸಾರಿಗೆ ನಿಗಮಗಳ ಆದಾಯಕ್ಕೆ ಹೊಡೆತ ಬಿದ್ದಿದ್ದು, ಒಟ್ಟು 287 ಕೋಟಿ ರೂಪಾಯಿ ನಷ್ಟವಾಗಿದೆ. ಕೆಎಸ್ಆರ್ಟಿಸಿಗೆ 122.50ಕೋಟಿ ರೂಪಾಯಿ, ಬಿಎಂಟಿಸಿಗೆ 45 ಕೋಟಿ ರೂಪಾಯಿ, ಎನ್ಡಬ್ಯೂಕೆಆರ್ಟಿಸಿಗೆ 57.50ಕೋಟಿ ರೂಪಾಯಿ, ಎನ್ಇಕೆಆರ್ಟಿಸಿಗೆ 62 ಕೋಟಿ ರೂಪಾಯಿ ನಷ್ಟ ಉಂಟಾಗಿದೆ. ಎಲ್ಲಾ ಸೇರಿ ಒಟ್ಟು 287 ಕೋಟಿ ರೂಪಾಯಿ ನಷ್ಟವಾಗಿದೆ ಅಂತ ಸಾರಿಗೆ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.