ಬೆಂಗಳೂರು : ಶಾಂತಿನಗರ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರ ಪುತ್ರ, ಕಾಂಗ್ರೆಸ್ ನ ಯುವ ನಾಯಕ ಮೊಹಮದ್ ನಲಪಾಡ್ ಹ್ಯಾರಿಸ್ ವಿರುದ್ದ ದೂರು ದಾಖಲಾಗಿದೆ. ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯ ಅವರು ನಲಪಾಡ್ ವಿರುದ್ದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಬುಧವಾರದಂದು ನಲಪಾಡ್ ಮತ್ತು ಅವರ ಬೆಂಬಲಿಗರು ಕಚೇರಿಗೆ ಆಗಮಿಸಿ ಕರ್ತವ್ಯಕ್ಕೆ ಅಡ್ಡಿಪಡ್ಡಿಸಿ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಾಗಿ ಭವ್ಯ ದೂರು ದಾಖಲಿಸಿದ್ದಾರೆ. ಕೋವಿಡ್ ವಾರ್ ರೂಮ್ ವಿಚಾರವಾಗಿ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಹಾಗೂ ನಲಪಾಡ್ ಹಾಗೂ ಬೆಂಬಲಿಗರ ನಡುವೆ ವಾಗ್ವಾದವಾಗಿತ್ತು. ಭವ್ಯ ಅವರು ರಕ್ಷಾ ರಾಮಯ್ಯ ಬೆಂಬಲಿಗರಾಗಿದ್ದಾರೆ. ಈ ಹಿನ್ನಲೆಯಲ್ಲಿ ಭವ್ಯ ದೂರು ದಾಖಲಿಸಿದ್ದಾರೆ.