ಪುತ್ತೂರು: ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಹಿಂದೂ ಕಾರ್ಯಕರ್ತರು ತಡೆದು ನಿಲ್ಲಿಸಿ ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಪುತ್ತೂರು ತಾಲೂಕು ಪಾಣಾಜೆ ನೆಲ್ಲಿತ್ತಿಮಾರ್ ಎಂಬಲ್ಲಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ವಿಲ್ಲಿ ಲೂಯಿಸ್ ಡಿಸೋಜಾ, ಸಂತೋಷ್ ಡಿಸೋಜಾ, ಸಿಲ್ವೆಸ್ಟರ್ ಡಿಸೋಜಾ ಬಂಧಿತರು.
ಫೆ.12 ರಂದು ಸಂಜೆ ವೇಳೆ ಪುತ್ತೂರು ತಾಲೂಕು ಪಾಣಾಜೆ ಗ್ರಾಮದ ನೆಲ್ಲಿತ್ತಿಮಾರ್ ಎಂಬಲ್ಲಿ ಅಶೋಕ್ ಲೇಲ್ಯಾಂಡ್ ಮಿನಿ ಗೂಡ್ಸ್ ವಾಹನವೊಂದರಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದಾಗ ಪುತ್ತೂರು ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ ಶ್ರೀನಾಥ ರೆಡ್ಡಿ ಹಾಗೂ ಸಿಬ್ಬಂದಿಗಳು ತಡೆದು ಪರಿಶೀಲಿಸಲಾಗಿ ಜಾನುವಾರು ಸಾಗಾಟಕ್ಕೆ ಯಾವುದೇ ಪರವಾನಿಗೆ ಅಥವಾ ಪಶು ವೈದ್ಯಾಧಿಕಾರಿಯವರ ಪ್ರಮಾಣಪತ್ರ ಇಲ್ಲದೇ ಒಂದು ಹಸು ಮತ್ತು ಒಂದು ಗಂಡು ಕರುವನ್ನು ಸಾಗಿಸುತ್ತಿರುವುದು ಕಂಡುಬಂದಿದ್ದು, ಈ ಬಗ್ಗೆ ಕೃತ್ಯದಲ್ಲಿ ತೊಡಗಿದ್ದ ಮೂವರನ್ನು ದಸ್ತಗಿರಿ ಮಾಡಿ, ಸದ್ರಿ ವಾಹನ ಹಾಗೂ ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 013-2023 ಕಲಂ:- 5, 7, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020ಯಂತೆ ಪ್ರಕರಣ ದಾಖಲಾಗಿದೆ..