ಮಂಗಳೂರು: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ರಿ. ಮಂಗಳೂರು ತಾಲೂಕಿನ ಅಧ್ಯಕ್ಷರಾಗಿ ಶಿವಪ್ರಸಾದ ಕೊಕ್ಕಡ ರವರು ಆಯ್ಕೆಯಾದರು.
ಇವರ ಪದಗ್ರಹಣ ಕಾರ್ಯಕ್ರಮವು ಫೆ.11 ರಂದು ಕದ್ರಿಯ ಬಾಲಭವನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಭಾರತ್ ಸ್ಕೌಟ್ಸ್ಮತ್ತು ಗೈಡ್ಸ್ ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್, ಕರ್ನಾಟಕ ರಾಜ್ಯ ಮ.ಸಾ.ಪ. ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷರಾದ ಪರಿಮಳ ಮಹೇಶ್ ರಾವ್ ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.