ಕಡಬ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬಾಲಕ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳದಲ್ಲಿ ನಡೆದಿದೆ.

ಮರ್ದಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಿಯಾ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಮರ್ದಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್ ಎದುರು ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ..
ಕಾರಿನಲ್ಲಿದ್ದ 14 ವರ್ಷದ ಬಾಲಕ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.