ಪುತ್ತೂರು: ಒಡಿಯೂರು ಶ್ರೀಗಳ ಷಷ್ಠ್ಯಬ್ದ ಸಂಭ್ರಮದ ಪ್ರಯುಕ್ತ ಪುತ್ತೂರು ಗೌಡ ಸಭಾಭವನದಲ್ಲಿ ಮೇ. ೨ ರಂದು ನಡೆಯಬೇಕಾಗಿದ್ದ ತುಳುನಾಡ ಐಸಿರಿ -2021 ತುಳು ಸಾಹಿತ್ಯ ಸಮ್ಮೇಳನವನ್ನು ಸರಕಾರದ ಕೋವಿಡ್ ಮುನ್ನೆಚ್ಚರಿಕೆ ಆದೇಶದನ್ವಯ ಅನಿರ್ದಿಷ್ಟ ಅವಧಿಯವರೆಗೆ ಮುಂದೂಡಲಾಗಿದೆ. ಕೋವಿಡ್ ನಿಯಮಗಳಿಗೆ ಒಳಪಟ್ಟು ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ದೊರೆಯದೆ ಇರುವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ನಡೆಸದಿರಲು ತೀರ್ಮಾನಿಸಲಾಗಿದೆ.
ಇದಲ್ಲದೆ ಮಹಾಲಿಂಗೇಶ್ವರ ಸನ್ನಿಧಿಯಿಂದ ಮಾಡಲು ಉದ್ದೇಶಿಸಲಾಗಿದ್ದ ಮೆರವಣಿಗೆಯನ್ನು ಕೂಡ ರದ್ದುಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಸರಕಾರದ ಅನುಮತಿ ಕೊಟ್ಟಲ್ಲಿ ನಡೆಸುವುದೆಂದು ಸಮಿತಿಯ ಪ್ರಕಟಣೆ ತಿಳಿಸಿದೆ. ಆದ್ದರಿಂದ ಸಾರ್ವಜನಿಕರು ಹಾಗೂ ಸಾಹಿತ್ಯ ಅಭಿಮಾನಿಗಳು ಸಹಕರಿಸುವಂತೆ ಷಷ್ಠ್ಯಬ್ದ ಸಮಿತಿಯ ಪದಾಧಿಕಾರಿಗಳ ಪ್ರಕಟಣೆ ತಿಳಿಸಿದೆ.